ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಗರಣ ಮಾಡಿಲ್ಲ ಎಂದು ಸುಧಾಕರ್ ಆಣೆ ಮಾಡ್ತಾರಾ?- ಪ್ರದೀಪ್ ಈಶ್ವರ್

ವಿಧಾನಸಭಾ ಚುನಾವಣೆ ಸೋಲು ಕಂಡಿರುವ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರಿಗೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ನೀಡಲಾಗಿದೆ. ರಾಜಕೀಯ ಎದುರಾಳಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರಪ್ಪ ಅವರು ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನಾನು ಹಗರಣ ಮಾಡಿಲ್ಲ ಎಂದು ನಾಳೆ ನಂದಿಭೋಗ ನಂದೀಶ್ವರ ದೇಗುಲದಲ್ಲಿ ಆಣೆ ಪ್ರಮಾಣ ಮಾಡುತ್ತೇನೆ. ಆದರೆ ಸುಧಾಕರ್ ಪ್ರಮಾಣ ಮಾಡುವುದಕ್ಕೆ ರೆಡಿ ಇದ್ದಾರಾ? ಎಂದು ಸವಾಲು ಹಾಕಿದ್ದಾರೆ.
03:47 PM Mar 25, 2024 IST | Chaitra Kulal

ಬೆಂಗಳೂರು: ವಿಧಾನಸಭಾ ಚುನಾವಣೆ ಸೋಲು ಕಂಡಿರುವ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರಿಗೆ ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ನೀಡಲಾಗಿದೆ. ರಾಜಕೀಯ ಎದುರಾಳಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರಪ್ಪ ಅವರು ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನಾನು ಹಗರಣ ಮಾಡಿಲ್ಲ ಎಂದು ನಾಳೆ ನಂದಿಭೋಗ ನಂದೀಶ್ವರ ದೇಗುಲದಲ್ಲಿ ಆಣೆ ಪ್ರಮಾಣ ಮಾಡುತ್ತೇನೆ. ಆದರೆ ಸುಧಾಕರ್ ಪ್ರಮಾಣ ಮಾಡುವುದಕ್ಕೆ ರೆಡಿ ಇದ್ದಾರಾ? ಎಂದು ಸವಾಲು ಹಾಕಿದ್ದಾರೆ.

Advertisement

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಡಾ.ಕೆ.ಸುಧಾಕರ್ ನೂರಾರು ಕೋಟಿ ಆಸ್ತಿ ಮಾಡಿದ್ದಾರೆ. ಅನೇಕ ಕಂಪನಿಗಳಿಗೆ ಸುಧಾಕರ್​ ಹೂಡಿಕೆ ಮಾಡಿದ್ದಾರೆ. ಶ್ರೀಲಂಕಾದಲ್ಲಿ ಸುಧಾಕರ್ ಅವರ ಪ್ರಾಪರ್ಟಿ ಇದೆ. ಬೆಂಗಳೂರಿನ ಸದಾಶಿವನಗರದಲ್ಲಿ ಅವರ​​ ಮನೆ ಇದೆ. ಇದೆಲ್ಲವೂ ಎಲ್ಲಿಂದ ಬಂದಿದೆ ಎಂದು ಅವರು ಹೇಳಲಿ ಎಂದು ವಾಗ್ದಾಳಿ ನಡೆಸಿದರು.

ಸುಧಾಕರ್​ ಕಾಂಗ್ರೆಸ್ ಸೇರಲು ಬಹಳ ಪ್ರಯತ್ನ ಮಾಡಿದರು. ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬರಲು ಬಹಳ ಪ್ರಯತ್ನ ಮಾಡಿದ್ದರು. ಕೆಲವು ನಾಯಕರ ಜೊತೆ ಸಿಎಂ, ಡಿಸಿಎಂ ಭೇಟಿ ಮಾಡಿಸಿ ಎಂದು ಹೇಳಿದ್ದರು. ಆದರೆ ಕೊನೆಗೆ ಸುಧಾಕರ್​ ಏನು ಯೋಚನೆ ಮಾಡಿದರು ಗೊತ್ತಿಲ್ಲ. ಬಿಜೆಪಿ ಬಿಟ್ಟರೆ ಐಟಿ, ಇಡಿ ರೇಡ್ ಆಗಬಹುದು ಎಂದು ಹೆದರಿದ್ದಾರೆ ಎಂದು ಪ್ರದೀಶ್ ಈಶ್ವರ್ ಹೇಳಿದರು.

Advertisement

Advertisement
Tags :
assemblyCongressDR.K.SUDHAKARELECTIONLatestNewsNewsKarnatakaPradeep EshwarSCAM
Advertisement
Next Article