For the best experience, open
https://m.newskannada.com
on your mobile browser.
Advertisement

ಮದುವೆಗೆ ಎರಡು ವಾರ ಬಾಕಿ ಇದ್ದಾಗ ಆತ್ಮಹತ್ಯೆ ಮಾಡಿಕೊಂಡ ಯುವತಿ

ಮದುವೆಗೆ ಎರಡು ವಾರ ಬಾಕಿ ಉಳಿದಿತ್ತು. ಪೋಷಕರು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದರೆ , ಮದುವೆಯಾಗಬೇಕಿದ್ದ ಯುವತಿ ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಶಿವಮೊಗ್ಗ  ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.
03:42 PM Jan 21, 2024 IST | Ashika S
ಮದುವೆಗೆ ಎರಡು ವಾರ ಬಾಕಿ ಇದ್ದಾಗ ಆತ್ಮಹತ್ಯೆ ಮಾಡಿಕೊಂಡ ಯುವತಿ

ಶಿವಮೊಗ್ಗ: ಮದುವೆಗೆ ಎರಡು ವಾರ ಬಾಕಿ ಉಳಿದಿತ್ತು. ಪೋಷಕರು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದರೆ ಮದುವೆಯಾಗಬೇಕಿದ್ದ ಯುವತಿ ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಶಿವಮೊಗ್ಗ  ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.

Advertisement

ಚೈತ್ರಾ(26) ನೇಣಿಗೆ ಶರಣಾಗಿದ ಯುವತಿ.

ಚೈತ್ರಗೆ ಮುಂದಿನ ಫೆಬ್ರವರಿ 4 ರಂದು ವಿವಾಹ ನಿಶ್ಚಯವಾಗಿತ್ತು. ಆದರೆ, ಇದೀಗ ಏಕಾಏಕಿ ಚೈತ್ರ ಆತ್ಮಹತ್ಯೆಗೆ ಶರಣಾಗಿದ್ದು,ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

Advertisement

ಎಂಕಾಂ ಪದವಿ ಪಡೆದಿದ್ದ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ನನಗೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎನ್ನಲಾಗಿದೆ. ಆದರೆ ಮನೆಯವರು ಮನವೊಲಿಸಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
Advertisement