For the best experience, open
https://m.newskannada.com
on your mobile browser.
Advertisement

ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿನಿಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಳಿ ನಡೆದಿದೆ. ನೇತ್ರಾವತಿ ನದಿಗೆ ಹಾರಿ ನಯನಾ ಎಂ.ಜಿ (27 ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
10:03 AM Feb 15, 2024 IST | Ashitha S
ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ಯುವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದ ಬಳಿ ನಡೆದಿದೆ. ನೇತ್ರಾವತಿ ನದಿಗೆ ಹಾರಿ ನಯನಾ ಎಂ.ಜಿ (27 ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ತುಮಕೂರಿನ ಮಧುಗಿರಿ ನಿವಾಸಿ ನಯನಾ ಎಂ.ಜಿ ಬೆಂಗಳೂರಿನಿಂದ ಮಂಗಳೂರಿಗೆ ಹೊರಟ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ಸಮೀಪ ಹಾದು ಹೋಗುವ ನೇತ್ರಾವತಿ ಸೇತುವೆ ಬಂದಂತೆ ನದಿಗೆ ಹಾರಿ ಮಹಿಳೆ ಯವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಮುಳುಗುತಜ್ಞ ಮಹಮ್ಮದ್ ತಂಡ ನದಿಯಿಂದ ನಯನಾ ಎಂ.ಜಿಯವರ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Advertisement
Tags :
Advertisement