For the best experience, open
https://m.newskannada.com
on your mobile browser.
Advertisement

ಶಿವಮೊಗ್ಗದ ಹೊಸನಗರದಲ್ಲಿ ಡೆಂಗ್ಯೂ ಜ್ವರಕ್ಕೆ ಮಹಿಳೆ ಮೃತ್ಯು

ಮಳೆಗಾಲ ಶುರುವಾಗುತ್ತಿದ್ದಂತೆ ಕರ್ನಾಟಕದ ಹಲವು ಕಡೆ ಡೆಂಗ್ಯೂ ಪ್ರಕರಣಗಳೂ ವರದಿಯಾಗುತ್ತಿವೆ. ಮಳೆ ನೀರು ನಿಂತು ಸೊಳ್ಳೆಗಳ ಪ್ರಮಾಣವೂ ಅಧಿಕವಾಗುತ್ತಿದೆ. 
06:51 PM Jul 09, 2024 IST | Chaitra Kulal
ಶಿವಮೊಗ್ಗದ ಹೊಸನಗರದಲ್ಲಿ ಡೆಂಗ್ಯೂ ಜ್ವರಕ್ಕೆ ಮಹಿಳೆ ಮೃತ್ಯು

ಶಿವಮೊಗ್ಗ: ಮಳೆಗಾಲ ಶುರುವಾಗುತ್ತಿದ್ದಂತೆ ಕರ್ನಾಟಕದ ಹಲವು ಕಡೆ ಡೆಂಗ್ಯೂ ಪ್ರಕರಣಗಳೂ ವರದಿಯಾಗುತ್ತಿವೆ. ಮಳೆ ನೀರು ನಿಂತು ಸೊಳ್ಳೆಗಳ ಪ್ರಮಾಣವೂ ಅಧಿಕವಾಗುತ್ತಿದೆ.

Advertisement

ಡೆಂಗ್ಯೂ ಜ್ವರಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ನಡೆದಿದೆ. ರಶ್ಮಿ ಆರ್.ನಾಯಕ್ (42) ಮೃತ ಮಹಿಳೆ. ಕಳೆದ 15 ದಿನಗಳಿಂದ ರಶ್ಮಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಶ್ಮಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Advertisement
Tags :
Advertisement