ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು: ವಿಮಾನ ಪ್ರಯಾಣ ವೇಳೆ ಮಹಿಳೆಗೆ ಕಿರುಕುಳ

ಇತ್ತೀಚೆಗೆ ಮಹಿಳಾ ವಿಮಾನ ಪ್ರಯಾಣಿಕರ ಮೇಲೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿಯ ಘಟನೆಯೊಂದು ಮತ್ತೆ ಪುನರಾವರ್ತನೆಯಾಗಿದೆ.
02:52 PM Nov 20, 2023 IST | Ashika S

ಬೆಂಗಳೂರು: ಇತ್ತೀಚೆಗೆ ಮಹಿಳಾ ವಿಮಾನ ಪ್ರಯಾಣಿಕರ ಮೇಲೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿಯ ಘಟನೆಯೊಂದು ಮತ್ತೆ ಪುನರಾವರ್ತನೆಯಾಗಿದೆ.

Advertisement

ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ಅನೇಕ ಎಚ್ಚರಿಕೆಗಳ ಹೊರತಾಗಿಯೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ನವೆಂಬರ್ 17 ರಂದು ವಿಮಾನ ಲ್ಯಾಂಡ್ ಆದ ನಂತರ 32 ವರ್ಷದ ಪ್ರಯಾಣಿಕರೊಬ್ಬರನ್ನು ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರಿಗೆ ಒಪ್ಪಿಸಿದ್ದಾರೆ. 'ಇಂಡಿಗೋದಿಂದ ಬಂದ ದೂರಿನ ಆಧಾರದ ಮೇಲೆ ನಾವು ಬಂಧಿಸಿದ್ದೇವೆ. ನಂತರ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು' ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

6E 556 ವಿಮಾನದಲ್ಲಿದ್ದ ಪ್ರಯಾಣಿಕರು ಮದ್ಯದ ಅಮಲಿನಲ್ಲಿದ್ದರು ಮತ್ತು ಅನೇಕ ಎಚ್ಚರಿಕೆಗಳ ಹೊರತಾಗಿಯೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ.

Advertisement
Tags :
LatestNewsNewsKannadaಕಿರುಕುಳಪ್ರಯಾಣಮಹಿಳಾವಿಮಾನ
Advertisement
Next Article