ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಸ್ಕೆಬೈಲ್‌ ತಿರುವಿನಲ್ಲಿ ಪಲ್ಟಿಯಾದ ಖಾಸಗಿ ಬಸ್‌ ಮಹಿಳೆ ಮೃತ್ಯು, 17 ಮಂದಿಗೆ ಗಾಯ

ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್‌ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್‌ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದೆ.
10:27 AM Nov 04, 2023 IST | Ramya Bolantoor

ಮೂಡಿಗೆರೆ: ಬೆಂಗಳೂರಿನಿಂದ ಹೊರನಾಡಿಗೆ ಹೊರಟಿದ್ದ ಖಾಸಗಿ ಬಸ್‌ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್‌ ಸಮೀಪ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿದೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

Advertisement

ಬೆಂಗಳೂರಿನ ಯಲಹಂಕದ ನಿವಾಸಿ ಸುರೇಖಾ (45) ಮೃತಪಟ್ಟಿದ್ದು, ಬಸ್‌ನಲ್ಲಿದ್ದ ಇನ್ನೂ 17 ಜನ ಗಾಯಗೊಂಡಿದ್ದಾರೆ. ಮೂಡಿಗೆರೆ ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್‌ನಲ್ಲಿ 48 ಪ್ರವಾಸಿಗರು ಇದ್ದರು. ಬೆಳಿಗಿನ ಜಾವ 4 ಗಂಟೆ ಸುಮಾರಿನಲ್ಲಿ ಬೇಲೂರು ಕಡೆಯಿಂದ ವೇಗವಾಗಿ ಬಂದ ಬಸ್, ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ಕಾಫಿ ತೋಟಕ್ಕೆ ಉರುಳಿದೆ. ಸ್ಥಳಕ್ಕೆ ಪೊಲೀಸ್‌ ಮತ್ತು ಆಗ್ನಿಶಾಮಕ ಸಿಬ್ಬಂದಿ ಬಂದು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Advertisement

Advertisement
Advertisement
Next Article