For the best experience, open
https://m.newskannada.com
on your mobile browser.
Advertisement

ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ

ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ನಡೆದಿದೆ.
10:35 AM Apr 05, 2024 IST | Ashika S
ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ

ದೆಹಲಿ:  ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ನೈಋತ್ಯ ದೆಹಲಿಯ ದ್ವಾರಕಾದಲ್ಲಿ ನಡೆದಿದೆ.

Advertisement

ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದರು ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು.

ನಂತರ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿ ಹೇಳಿದ ಮನೆಗೆ ಹೋಗಿದ್ದಾರೆ. ಫ್ಲಾಟ್​ಗೆ ತೆರಳಿದಾಗ ಆಕೆಯ ಮೃತದೇಹವು ರೂಮಿನ ಕಪಾಟಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

Advertisement

ಕಳೆದ ಒಂದೂವರೆ ತಿಂಗಳಿನಿಂದ ತನ್ನ ಮಗಳು ವಿಪಾಲ್ ಜೊತೆ ಬಾಡಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದಳು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಡಿಡಿಯು ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Advertisement
Tags :
Advertisement