For the best experience, open
https://m.newskannada.com
on your mobile browser.
Advertisement

ವುಮೆನ್ಸ್ ಪ್ರೀಮಿಯರ್ ಲೀಗ್​: ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ರೋಚಕ ಜಯ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ರೋಚಕ ಜಯ ಸಾಧಿಸಿದೆ.
09:13 AM Feb 24, 2024 IST | Ashika S
ವುಮೆನ್ಸ್ ಪ್ರೀಮಿಯರ್ ಲೀಗ್​  ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ರೋಚಕ ಜಯ

ಬೆಂಗಳೂರು:  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ  ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ರೋಚಕ ಜಯ ಸಾಧಿಸಿದೆ.

Advertisement

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಜಯಿಸಿದ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ (1) ಶಬ್ನಿಮ್ ಇಸ್ಮಾಯಿಲ್ ಎಸೆದ ಮೊದಲ ಓವರ್​ನಲ್ಲೇ ಕ್ಲೀನ್ ಬೌಲ್ಡ್ ಆಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಅಲೀಸ್ ಕ್ಯಾಪ್ಟಿ ಅರ್ಧಶತಕದ ಜೊತೆಯಾಟವಾಡಿದರು.

Advertisement

ಇನ್ನು ಅಂತಿಮ ಹಂತದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಜೆಮಿಮಾ ಕೇವಲ 24 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 42 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 171 ರನ್ ಕಲೆಹಾಕಿತು.

ಬೃಹತ್ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯಶಸ್ವಿಯಾಯಿತು. ಮೊದಲ ಓವರ್​ನ 2ನೇ ಎಸೆತದಲ್ಲಿ ಹೇಲಿ ಮ್ಯಾಥ್ಯೂಸ್ (0) ವಿಕೆಟ್ ಪಡೆದು ಮರಿಝನ್ನೆ ಕಪ್ ಡೆಲ್ಲಿಗೆ ಮೊದಲ ಯಶಸ್ಸು ತಂದುಕೊಟ್ಟರು.

ಇದರ ಬೆನ್ನಲ್ಲೇ ಸ್ಕೀವರ್ ಬ್ರಂಟ್ (19) ಅರುಂಧತಿ ರೆಡ್ಡಿ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾಗ್ಯೂ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಯಾಸ್ತಿಕಾ ಭಾಟಿಯಾ 45 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 57 ರನ್ ಬಾರಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕಿ ಹರ್ಮನ್​ಪ್ರೀತ್ ಕೌರ್ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಕೌರ್ ಫೋರ್​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 55 ರನ್ ಬಾರಿಸಿದರು.

ಕೊನೆಯ ಓವರ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ 12 ರನ್​ಗಳ ಅವಶ್ಯಕತೆಯಿತ್ತು. ಅಲೀಸ್ ಕ್ಯಾಪ್ಟಿ ಎಸೆದ ಅಂತಿಮ ಓವರ್​ನ ಮೊದಲ ಎಸೆತದಲ್ಲಿ ಪೂಜಾ ವಸ್ತ್ರಾಕರ್ ಕ್ಯಾಚ್ ನೀಡಿ ಔಟಾದರು. 2ನೇ ಎಸೆತದಲ್ಲಿ ಅಮನ್​ಜೋತ್ ಕೌರ್ 2 ರನ್ ಕಲೆಹಾಕಿದರು. 3ನೇ ಎಸೆತದಲ್ಲಿ 1 ರನ್​.

ಕೊನೆಯ ಎಸೆತದಲ್ಲಿ 5 ರನ್​ಗಳು ಬೇಕಿತ್ತು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಸಂಜನಾ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಮುಂಬೈ ಇಂಡಿಯನ್ಸ್​ಗೆ ರೋಚಕ ಜಯ ತಂದುಕೊಟ್ಟರು.

Advertisement
Tags :
Advertisement