ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವುಮೆನ್ಸ್ ಪ್ರೀಮಿಯರ್ ಲೀಗ್: ಗುಜರಾತ್​ ವಿರುದ್ಧ ಆರ್​​ಸಿಬಿಗೆ 8 ವಿಕೆಟ್​ಗಳ ಜಯ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ತನ್ನ ಎರಡನೇ ಪಂದ್ಯದಲ್ಲಿಯೂ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಭರ್ಜರಿ ಜಯ ಸಾಧಿಸಿದೆ.
08:15 AM Feb 28, 2024 IST | Ashika S

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ ತನ್ನ ಎರಡನೇ ಪಂದ್ಯದಲ್ಲಿಯೂ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಭರ್ಜರಿ ಜಯ ಸಾಧಿಸಿದೆ.

Advertisement

ಟಾಸ್​ ಗೆದ್ದು ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡ ಆರ್​ಸಿಬಿ ಗುಜರಾತ್​ ವಿರುದ್ಧ ಅದ್ಭುತ ಪ್ರದರ್ಶನ ನೀಡಿತು. ಈ ಮೂಲಕ ಗುಜರಾತ್​ ಜೈಂಟ್ಸ್​ ತಂಡವು 20 ಓವರ್​ ಗೆ 7 ವಿಕೆಟ್​ ಗೆ 107 ರನ್​​ ಗಳಿಸುವ ಮೂಲಕ ಆರ್​ಸಿಬಿ ತಂಡಕ್ಕೆ 108 ರನ್​ ಟಾರ್ಗೆಟ್ ನೀಡಿತು.

ಕೆಳ ಕ್ರಮಾಂಕದಲ್ಲಿ ಆರ್​ಸಿಬಿ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಹೇಮಲತಾ 31 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುಜರಾತ್ ಜೈಂಟ್ಸ್ ತಂಡವು 107 ರನ್​ ಕಲೆಹಾಕಿತು.

Advertisement

108 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ಸೋಫಿ ಡಿವೈನ್ (6) ಮತ್ತೊಮ್ಮೆ ವಿಫಲರಾದರು. ಮತ್ತೊಂದೆಡೆ ನಾಯಕಿಯ ಆಟವಾಡಿದ ಸ್ಮೃತಿ ಮಂಧಾನ 27 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 43 ರನ್ ಬಾರಿಸಿ ಮಿಂಚಿದರು.

Advertisement
Tags :
LatetsNewsNewsKannadaಪಂದ್ಯರಾಯಲ್ ಚಾಲೆಂಜರ್ಸ್ವುಮೆನ್ಸ್ ಪ್ರೀಮಿಯರ್ ಲೀಗ್
Advertisement
Next Article