ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಹಿಳಾ ಪ್ರೀಮಿಯರ್ ಲೀಗ್‌: ಮುಂಬೈ ಇಂಡಿಯನ್ಸ್‌ ವಿರುದ್ಧ ಯುಪಿ ವಾರಿಯರ್ಸ್‌ ಭರ್ಜರಿ ಜಯ

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ ಆರನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಲೀಗ್​ನಲ್ಲಿ ಮೊದಲ ಜಯ ದಾಖಲಿಸಿದೆ. 
07:08 AM Feb 29, 2024 IST | Ashika S

ಬೆಂಗಳೂರು: ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್‌ನ ಆರನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಲೀಗ್​ನಲ್ಲಿ ಮೊದಲ ಜಯ ದಾಖಲಿಸಿದೆ.

Advertisement

ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಪಿ ವಾರಿಯರ್ಸ್ ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಗೆಲುವಿಗೆ 162 ರನ್​ಗಳ ಸವಾಲನ್ನು ನೀಡಿತು.

ಮುಂಬೈ ನೀಡಿದ 162 ರನ್​ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಯುಪಿ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕಿ ಅಲಿಸ್ಸಾ ಹೀಲಿ ಹಾಗೂ ಕಿರಣ್ ನವಗಿರೆ 91 ರನ್​ಗಳ ಬೃಹತ್ ಜೊತೆಯಾಟ ನೀಡಿದರು. ಕಿರಣ್ ಅವರ ಈ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ಯುಪಿ ವಾರಿಯರ್ಸ್ ಗೆಲುವು ಸುಲಭವಾಯಿತು.

Advertisement

ಆ ನಂತರ ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿ ಬಂದ ಗ್ರೇಸ್ ಹ್ಯಾರಿಸ್ ಹಾಗೂ ದೀಪ್ತಿ ಶರ್ಮಾ ಕ್ರಮವಾಗಿ 38 (17 ಎಸೆತಗಳು) 27 ರನ್ ಕಲೆಹಾಕಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡಕ್ಕೆ ಆರಂಭಿಕರು ಅರ್ಧಶತಕದ ಜೊತೆಯಾಟ ನೀಡಿದರು. ಓಪನರ್ ಹೇಲಿ ಮ್ಯಾಥ್ಯೂಸ್ 55 ರನ್​ಗಳ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಯಾಸ್ತಿಕಾ ಭಾಟಿಯಾ 26 ರನ್ ಗಳಿಸಿ ಔಟಾದರು. ನಾಯಕಿ ನ್ಯಾಟ್ ಸ್ಕಿವರ್-ಬ್ರಂಟ್ 19 ರನ್​ಗಳಿಗೆ ಸುಸ್ತಾದರೆ, ಅಮೆಲಿಯಾ ಕೆರ್ 23 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಕೊನೆಯಲ್ಲಿ ಪೂಜಾ ವಸ್ತ್ರಾಕರ್ 18 ರನ್, ಇಸ್ಸಿ ವಾಂಗ್ 15 ರನ್ ಬಾರಿಸಿ ತಂಡವನ್ನು 161 ರನ್​ಗಳ ಸ್ಫರ್ಧಾತ್ಮಕ ಮೊತ್ತದ ಕೊಂಡೊಯ್ದಿದ್ದರು.

Advertisement
Tags :
LatetsNewsNewsKannadaಜಯಮಹಿಳಾ ಪ್ರೀಮಿಯರ್ ಲೀಗ್‌ಮುಂಬೈ ಇಂಡಿಯನ್ಸ್ಯುಪಿ ವಾರಿಯರ್ಸ್‌
Advertisement
Next Article