For the best experience, open
https://m.newskannada.com
on your mobile browser.
Advertisement

ಮಹಿಳಾ ಪ್ರೀಮಿಯರ್ ಲೀಗ್‌: ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ಮುಖಾಮುಖಿ

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್‌ನ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿ ಆಗಿವೆ. 
07:47 PM Mar 10, 2024 IST | Ashika S
ಮಹಿಳಾ ಪ್ರೀಮಿಯರ್ ಲೀಗ್‌  ಡೆಲ್ಲಿ ಕ್ಯಾಪಿಟಲ್ಸ್  ಆರ್​ಸಿಬಿ ಮುಖಾಮುಖಿ

ದೆಹಲಿ:  ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್‌ನ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿ ಆಗಿವೆ.

Advertisement

ಅಂಕಪಟ್ಟಿಯಲ್ಲಿ ಡೆಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಸ್ತುತ ಮೂರನೇ ಸ್ಥಾನದಲ್ಲಿದೆ.

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಅದರಂತೆ ಟಾಸ್ ಸೋತ ಆರ್​ಸಿಬಿ ಮೊದಲು ಬೌಲಿಂಗ್ ಮಾಡಲಿದೆ.

Advertisement

ಇಂದಿನ ಪಂದ್ಯದಲ್ಲಿ ಅದ್ಭುತ ಗೆಲುವು ದಾಖಲಿಸುವ ಮೂಲಕ ಮಂಧಾನ ಪಡೆ ಎರಡನೇ ಸ್ಥಾನಕ್ಕೇರುವ ಗುರಿ ಹೊಂದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಗೆಲುವಿನ ಸರಣಿಯನ್ನು ಮುಂದುವರೆಸುವ ಇರಾದೆಯಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಇದುವರೆಗೆ ಮೂರು ಪಂದ್ಯಗಳು ನಡೆದಿವೆ . ಅಚ್ಚರಿಯ ಸಂಗತಿ ಎಂದರೆ ಇಲ್ಲಿಯವರೆಗೂ ದೆಹಲಿ ತಂಡವನ್ನು ಸೋಲಿಸುವಲ್ಲಿ ಬೆಂಗಳೂರು ತಂಡ ವಿಫಲವಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಎಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಶಿಖಾ ಪಾಂಡೆ, ಟಿಟಾಸ್ ಸಾಧು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ದಿಶಾ ಕ್ಯಾಸಟ್, ಜಾರ್ಜಿಯಾ ವೇರ್‌ಹ್ಯಾಮ್, ಸೋಫಿ ಮೊಲಿನೆಕ್ಸ್, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಕೂರ್ ಸಿಂಗ್.

Advertisement
Tags :
Advertisement