For the best experience, open
https://m.newskannada.com
on your mobile browser.
Advertisement

ವುಮೆನ್ಸ್ ಪ್ರೀಮಿಯರ್ ಲೀಗ್: ಇಂದು ಯುಪಿ ವಾರಿಯರ್ಸ್, ಗುಜರಾತ್ ಜೈಂಟ್ಸ್ ಮುಖಾಮುಖಿ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್ 2024 ರ 18 ನೇ ಪಂದ್ಯವು ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್  ನಡುವೆ ನಡೆಯಲಿದೆ.
07:53 PM Mar 11, 2024 IST | Ashika S
ವುಮೆನ್ಸ್ ಪ್ರೀಮಿಯರ್ ಲೀಗ್  ಇಂದು ಯುಪಿ ವಾರಿಯರ್ಸ್  ಗುಜರಾತ್ ಜೈಂಟ್ಸ್ ಮುಖಾಮುಖಿ

ದೆಹಲಿ: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್ 2024 ರ 18 ನೇ ಪಂದ್ಯವು ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್  ನಡುವೆ ನಡೆಯಲಿದೆ.

Advertisement

ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.

ಗುಜರಾತ್ ತಂಡಕ್ಕೆ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಏಕೆಂದರೆ ಈಗಾಗಲೇ ಟೂರ್ನಿಯಲ್ಲಿ ಹೆಚ್ಚು ಸೋಲು ಕಂಡಿರುವ ಗುಜರಾತ್​ಗೆ ಪ್ಲೇ ಆಫ್ ತಲುಪುವ ಆಸೆ ಕೊನೆಗೊಂಡಿದೆ.

Advertisement

ಯುಪಿ ವಾರಿಯರ್ಸ್ ಗುಜರಾತ್ ತಂಡವನ್ನು ದೊಡ್ಡ ಅಂತರದಿಂದ ಸೋಲಿಸುವ ಮೂಲಕ ಪ್ಲೇ ಆಫ್ ತಲುಪಲು ಸುವರ್ಣಾವಕಾಶವನ್ನು ಹೊಂದಿದೆ. ಆದಾಗ್ಯೂ, ಯುಪಿ ತಂಡ ಇಂದಿನ ಪಂದ್ಯದ ಜಯದ ಜೊತೆಗೆ ನಾಳೆ ನಡೆಯುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸೋಲಿಗಾಗಿ ಪ್ರಾರ್ಥಿಸಬೇಕಿದೆ. ಹೀಗಾದರೆ ಮಾತ್ರ ಯುಪಿ ತಂಡ ಪ್ಲೇ ಆಫ್‌ನಲ್ಲಿ ತನ್ನ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗುತ್ತದೆ.

ಗುಜರಾತ್ ಜೈಂಟ್ಸ್: ಲಾರಾ ವೋಲ್ವರ್ಡ್, ಬೆತ್ ಮೂನಿ (ನಾಯಕಿ/ವಿಕೆಟ್ ಕೀಪರ್), ಫೋಬೆ ಲಿಚ್‌ಫೀಲ್ಡ್, ದಯಾಲನ್ ಹೇಮಾಲತಾ, ಆಶ್ಲೇ ಗಾರ್ಡ್ನರ್, ಭಾರತಿ ಫುಲ್ಮಾಲಿ, ಕ್ಯಾಥರೀನ್ ಬ್ರೈಸ್, ಮನ್ನತ್ ಕಶ್ಯಪ್, ತನುಜಾ ಕನ್ವರ್, ಮೇಘನಾ ಸಿಂಗ್, ಶಬ್ನಮ್ ಶಕೀಲ್.

ಯುಪಿ ವಾರಿಯರ್ಸ್: ಅಲಿಸಾ ಹೀಲಿ (ನಾಯಕಿ/ವಿಕೆಟ್ ಕೀಪರ್), ಕಿರಣ್ ನವಗಿರೆ, ಚಾಮರಿ ಅಥಾಪತು, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಶ್ವೇತಾ ಸೆಹ್ರಾವತ್, ಪೂನಂ ಖೇಮ್ನಾರ್, ಸೋಫಿ ಎಕ್ಲೆಸ್ಟೋನ್, ಸೈಮಾ ಠಾಕೋರ್, ರಾಜೇಶ್ವರಿ ಗಾಯಕ್ವಾಡ್, ಅಂಜಲಿ.

Advertisement
Tags :
Advertisement