For the best experience, open
https://m.newskannada.com
on your mobile browser.
Advertisement

ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ​ಗೆ ಇಂದು ಚಾಲನೆ

ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಆವೃತ್ತಿಗೆ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಒಟ್ಟು 24 ದಿನಗಳ ಕಾಲ ಈ ಟೂರ್ನಿ ನಡೆಯಲಿದೆ.
08:07 AM Feb 23, 2024 IST | Ashika S
ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿ​ಗೆ ಇಂದು ಚಾಲನೆ

ಬೆಂಗಳೂರು: ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಆವೃತ್ತಿಗೆ ಇಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚಾಲನೆ ಸಿಗಲಿದೆ. ಒಟ್ಟು 24 ದಿನಗಳ ಕಾಲ ಈ ಟೂರ್ನಿ ನಡೆಯಲಿದೆ.

Advertisement

ಟೂರ್ನಿಯ ಮೊದಲ ಪಂದ್ಯದಲ್ಲಿ ಇಂದು ಹರ್ಮನ್​ಪ್ರಿತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಮುಖಾಮುಖಿ ಆಗಲಿದೆ.

ಈ ಪಂದ್ಯ ಆರಂಭಕ್ಕೂ ಮುನ್ನ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದರಲ್ಲಿ ಶಾಹಿದ್ ಕಪೂರ್, ಶಾರುಖ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಅಭಿಮಾನಿಗಳನ್ನು ರಂಜಿಸಲಿದ್ದಾರೆ.

Advertisement

ಮಹಿಳಾ ಪ್ರೀಮಿಯರ್ ಲೀಗ್​ನ ಮುಂಬೈ-ಡೆಲ್ಲಿ ನಡುವಣ ಮೊದಲ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಟಿವಿಯಲ್ಲಿ ಸ್ಪೋರ್ಟ್ಸ್ 18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಅಲ್ಲದೆ ಮೊಬೈಲ್‌ನಲ್ಲಿ ಪಂದ್ಯಗಳನ್ನು ಜಿಯೋ ಸಿನಿಮಾ ಆ್ಯಪ್‌ನಲ್ಲಿ ವೀಕ್ಷಿಸಬಹುದಾಗಿದೆ. ಸಂಜೆ ಸುಮಾರು 6.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಮುಂಬೈ ಇಂಡಿಯನ್ಸ್: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್, ಕ್ಲೋಯ್ ಟ್ರಯಾನ್, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್, ಹುಮೈರಾ ಕಾಜಿ, ಇಸ್ಸಿ ವಾಂಗ್, ಜಿಂತಿಮಣಿ ಕಲಿತಾ, ನ್ಯಾಟ್ ಸ್ಕಿವರ್-ಬ್ರಂಟ್, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್, ಅಮನದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ಡೆಲ್ಲಿ ಕ್ಯಾಪಿಟಲ್ಸ್: ಆಲಿಸ್ ಕ್ಯಾಪ್ಸೆ, ಅರುಂಧತಿ ರೆಡ್ಡಿ, ಜೆಮಿಮಾ ರಾಡ್ರಿಗಸ್, ಜೆಸ್ ಜೊನಾಸೆನ್, ಲಾರಾ ಹ್ಯಾರಿಸ್, ಮರಿಜಾನ್ನೆ ಕಪ್, ಮೆಗ್ ಲ್ಯಾನಿಂಗ್, ಮಿನ್ನು ಮಣಿ, ಪೂನಮ್ ಯಾದವ್, ರಾಧಾ ಯಾದವ್, ಶೆಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತನಿಯಾಸ್ ಭಾಟಿಯಾ, ಅನ್ನಾಸ್ ಭಾಟಿಯಾ, ಅನ್ನಾಸ್ ಭಾಟಿಯಾ, ಅಪರ್ಣಾ ಮೊಂಡಲ್, ಅಶ್ವನಿ ಕುಮಾರಿ.

Advertisement
Tags :
Advertisement