ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಶ್ವಕಪ್‌: ಆಸ್ಟ್ರೇಲಿಯಾ ಯಶಸ್ಸಿನ ಹಿಂದೆ ಕುಡ್ಲ ಯುವತಿಯ ಶ್ರಮ

ಸೋಲಿಲ್ಲದೆ ತವರು ಅಭಿಮಾನಿಗಳ ಎದುರು ಮೂರನೇ ಏಕದಿನ ವಿಶ್ವಕಪ್‌ ಗೆಲ್ಲುವ ಭಾರತ ತಂಡದ ಕನಸು ಭಗ್ನವಾಯಿತು.
01:48 PM Nov 21, 2023 IST | Ramya Bolantoor

ಮಂಗಳೂರು: ಸೋಲಿಲ್ಲದೆ ತವರು ಅಭಿಮಾನಿಗಳ ಎದುರು ಮೂರನೇ ಏಕದಿನ ವಿಶ್ವಕಪ್‌ ಗೆಲ್ಲುವ ಭಾರತ ತಂಡದ ಕನಸು ಭಗ್ನವಾಯಿತು. ಮಿಚೆಲ್‌ ಸ್ಟಾರ್ಕ್‌ (55ಕ್ಕೆ 3) ಮಾರಕ ದಾಳಿ ಹಾಗೂ ಟ್ರಾವಿಸ್‌ ಹೆಡ್‌ (137 ರನ್‌) ಅವರ ಶತಕದ ಬಲದಿಂದ ಆಸ್ಟ್ರೇಲಿಯಾ ತಂಡ ಫೈನಲ್‌ನಲ್ಲಿ 6 ವಿಕೆಟ್‌ಗಳಿಂದ ಭಾರತವನ್ನು ಮಣಿಸಿತು. ಆ ಮೂಲಕ ಆರನೇ ಬಾರಿ ಏಕದಿನ ವಿಶ್ವಕಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಅಂತಹ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮ್ಯಾನೆಜರ್ ಕರಾವಳಿ ಮೂಲದ ಯುವತಿ ಕಾರ್ಯನಿರ್ವಹಿಸಿದ್ದು, ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಮಂಗಳೂರು ಸಮೀಪದ ಕಿನ್ನಿಗೋಳಿ ಮೂಲದ ಊರ್ಮಿಳಾ ರೊಸಾರಿಯೊ ಕ್ರಿಕೆಟ್ ಆಸ್ಟೇಲಿಯಾ ತಂಡದ ಮ್ಯಾನೇಜರ್. 34 ವರ್ಷದ ಊರ್ಮಿಳಾ ಮಂಗಳೂರು ಸಮೀಪದ ಕಿನ್ನಿಗೋಳಿ ಮೂಲದ ಐವಿ ಮತ್ತು ವ್ಯಾಲೆಂಟೈನ್ ರೊಸಾರಿಯೋ ದಂಪತಿಯ ಪುತ್ರಿ. ಸದ್ಯ ಆಕೆಯ ತಂದೆ ತಾಯಿ ಏಳು ವರ್ಷಗಳ ಹಿಂದೆ ಭಾರತಕ್ಕೆ ಮರಳಿದರು ಮತ್ತು ಸಕಲೇಶಪುರದಲ್ಲಿ ನೆಲೆಸಿದ್ದಾರೆ.

Advertisement

ಊರ್ಮಿಳಾ ರೊಸಾರಿಯೋ ಕಾರ್ನೆಗೀ ಮೆಲನ್ ವಿಶ್ವವಿದ್ಯಾನಿಲಯದಿಂದ ಬಿಬಿಎ ಪದವೀಧರರಾಗಿದ್ದಾರೆ. ತನ್ನ ಬಾಲ್ಯದಿಂದಲೂ ಕ್ರೀಡಾ ಪಟುವಾಗಿದ್ದ ಊರ್ಮಿಳಾ ಕತಾರ್ ಟೆನಿಸ್ ಫೆಡರೇಶನ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ್ದಳು. ಬಳಿಕ ಆಸ್ಟ್ರೇಲಿಯಾದಲ್ಲಿ, ಅವರು ಮೊದಲು ಅಡಿಲೇಡ್ ಕ್ರಿಕೆಟ್ ತಂಡದೊಂದಿಗೆ ಸುಮಾರು ಮೂರು ವರ್ಷಗಳ ಕಾಲ ಕೆಲಸ ಮಾಡಿದರು. ನಂತರ, ಅವರು ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡದ ಮ್ಯಾನೇಜರ್‌ ಆಗಿ ಬಡ್ತಿ ಪಡೆದರು. ಕಳೆದ ಫುಟ್ಬಾಲ್ ವಿಶ್ವಕಪ್ ಸಮಯದಲ್ಲಿನಾಲ್ಕು ತಿಂಗಳ ಕಾಲ ಕತಾರ್‌ನಲ್ಲಿ ಫುಟ್‌ಬಾಲ್ ಕ್ರೀಡಾಂಗಣವನ್ನು ನಿರ್ವಹಣೆ ಜವಾಬ್ದಾರಿ ಹೊತ್ತಿದ್ದರು. ಬಳಿಕ ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕತಾರ್‌ನಿಂದ ಆಸ್ಟ್ರೇಲಿಯಾಕ್ಕೆ ಹಿಂದಿರುಗಿ ವಿಶ್ವಕಪ್‌ ಗಾಗಿ ಆಸ್ಟ್ರೇಲಿಯಾದ ಪುರುಷರ ಕ್ರಿಕೆಟ್ ತಂಡದ ಹೊಣೆ ಹೊತ್ತರು.

Advertisement
Advertisement
Tags :
cricketKARNATAKALatestNewsNewsKannadaಆಸ್ಟ್ರೇಲಿಯಾಮಂಗಳೂರು
Advertisement
Next Article