ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫೈನಲ್ ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಿದ ಕನ್ನಡತಿ ಶ್ರೇಯಾಂಕಾ ಪಾಟೀಲ್

ಮಹಿಳಾ ಪ್ರೀಮಿಯರ್ ಲೀಗ್ 2024 ರ ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಆರ್​ಸಿಬಿ ಮಹಿಳಾ ಪಡೆ ಚೊಚ್ಚಲ ಟ್ರೋಫಿ ಎತ್ತಿಹಿಡಿದಿದೆ. ಡೆಲ್ಲಿ ನೀಡಿದ 113 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ 2 ವಿಕೆಟ್ ಕಳೆದುಕೊಂಡು 3 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.
07:02 AM Mar 18, 2024 IST | Ashitha S

ಮಹಿಳಾ ಪ್ರೀಮಿಯರ್ ಲೀಗ್ 2024 ರ ಅಂತಿಮ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಆರ್​ಸಿಬಿ ಮಹಿಳಾ ಪಡೆ ಚೊಚ್ಚಲ ಟ್ರೋಫಿ ಎತ್ತಿಹಿಡಿದಿದೆ. ಡೆಲ್ಲಿ ನೀಡಿದ 113 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ 2 ವಿಕೆಟ್ ಕಳೆದುಕೊಂಡು 3 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.

Advertisement

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆದರೆ ಮೊದಲ ವಿಕೆಟ್ ಪತನವಾದ ಬಳಿಕ ಡೆಲ್ಲಿ ಲಯ ಕಳೆದುಕೊಂಡಿತು. ಇದರ ಲಾಭ ಪಡೆದ ಆರ್​ಸಿಬಿ ಬೌಲರ್​ಗಳು ಡೆಲ್ಲಿಯನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ಪರ ಕನ್ನಡತಿ ಶ್ರೇಯಾಂಕಾ ಪಾಟೀಲ್ ಐತಿಹಾಸಿಕ ಸಾಧನೆ ಕೂಡ ಮಾಡಿದರು. ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಮಾಡಿದ 21 ವರ್ಷದ ಶ್ರೇಯಾಂಕಾ ಪಾಟೀಲ್ ತಮ್ಮ ಖೋಟಾದ 3.3 ಓವರ್​ಗಳಲ್ಲಿ 12 ರನ್ ನೀಡಿ ನಾಲ್ಕು ವಿಕೆಟ್ ಪಡೆದರು.

ಈ ಪಂದ್ಯದಲ್ಲಿ ಶ್ರೇಯಾಂಕಾ ಪಾಟೀಲ್ ಹೊರತಾಗಿ ಸೋಫಿ ಮೊಲಿನೋ ಕೂಡ ಅದ್ಭುತ ಬೌಲಿಂಗ್ ಮಾಡಿ ತಮ್ಮ ಖೋಟಾದ 4 ಓವರ್‌ಗಳಲ್ಲಿ 20 ರನ್‌ ನೀಡಿ 3 ವಿಕೆಟ್‌ ಪಡೆದರು. ವಿಶೇಷವೆಂದರೆ ಸೋಫಿ ಮೊಲಿನೊ ಒಂದೇ ಓವರ್‌ನಲ್ಲಿ ಎಲ್ಲಾ ಮೂರು ವಿಕೆಟ್‌ಗಳನ್ನು ಪಡೆದರು

Advertisement
Tags :
indiaLatestNewsNewsKannadaRCBಶ್ರೇಯಾಂಕಾ ಪಾಟೀಲ್
Advertisement
Next Article