For the best experience, open
https://m.newskannada.com
on your mobile browser.
Advertisement

ವುಮೆನ್ಸ್ ಪ್ರೀಮಿಯರ್ ಲೀಗ್: ಇಂದು ಯುಪಿ ವಾರಿಯರ್ಸ್ vs ಆರ್‌ಸಿಬಿ ಮುಖಾಮುಖಿ

ವುಮೆನ್ಸ್​ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಮತ್ತು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳಬೇಕಾದ ಅನಿವಾರ್ಯತೆ ಆರ್​ಸಿಬಿ ತಂಡದ ಮುಂದಿದೆ.
08:45 AM Mar 04, 2024 IST | Ashitha S
ವುಮೆನ್ಸ್ ಪ್ರೀಮಿಯರ್ ಲೀಗ್  ಇಂದು ಯುಪಿ ವಾರಿಯರ್ಸ್ vs ಆರ್‌ಸಿಬಿ ಮುಖಾಮುಖಿ

ಬೆಂಗಳೂರು: ವುಮೆನ್ಸ್​ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಮತ್ತು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳಬೇಕಾದ ಅನಿವಾರ್ಯತೆ ಆರ್​ಸಿಬಿ ತಂಡದ ಮುಂದಿದೆ.

Advertisement

ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲನುಭವಿಸಿದೆ. ವಿಶೇಷ ಎಂದರೆ ಇದು ಬೆಂಗಳೂರಿನಲ್ಲಿ ನಡೆಯಲಿರುವ ಕೊನೆಯ ಪಂದ್ಯ. ಮುಂದಿನ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಇನ್ನು ಯುಪಿ ವಾರಿಯರ್ಸ್ ವಿರುದ್ಧದ ಮೊದಲ ಪಂದ್ಯವನ್ನು ಆರ್​ಸಿಬಿ ಕೇವಲ 2 ರನ್​ಗಳಿಂದ ಗೆದ್ದುಕೊಂಡಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ*, ಹೀದರ್ ನೈಟ್*, ಇಂದ್ರಾಣಿ ರಾಯ್, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್*, ಜಾರ್ಜಿಯಾ ವೇರ್ಹ್ಯಾಮ್*, ಏಕ್ತಾ ಬಿಶ್ತ್, ಕೇಟ್ ಕ್ರಾಸ್*, ಶುಭಾ ಸತೀಶ್, ಸಿಮ್ರಾನ್ ಬಹದ್ದೂರ್, ಸಬ್ಬಿನೇನಿ ಮೇಘನಾ, ಸೋಫಿ ಮೊಲಿನಕ್ಸ್*.

ಯುಪಿ ವಾರಿಯರ್ಸ್​ ತಂಡ: ಅಲಿಸ್ಸಾ ಹೀಲಿ (ನಾಯಕಿ), ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್*, ಕಿರಣ್ ನವಗಿರೆ, ಚಾಮರಿ ಅಥಾಪತ್ತು*, ಲಕ್ಷ್ಮಿ ಯಾದವ್, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಎಸ್. ಯಶಸ್ರಿ, ಶ್ವೇತಾ ಸೆಹ್ರಾವತ್, ಸೋಫಿ ಎಕ್ಲೆಸ್ಟೋನ್*, ತಹ್ಲಿಯಾ, ಡ್ಯಾನಿ ವ್ಯಾಟ್*, ವೃಂದಾ ದಿನೇಶ್, ಪೂನಮ್ ಖೇಮ್ನಾರ್, ಸೈಮಾ ಠಾಕೋರ್, ಗೌಹರ್ ಸುಲ್ತಾನಾ.

Advertisement
Tags :
Advertisement