ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ಬಿಎಸ್‌ವೈ ಧ್ವನಿ ಮಾದರಿ ಸಂಗ್ರಹ

ಹದಿನೇಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಯಡಿಯೂರಪ್ಪ ಅವರ ಧ್ವನಿ ಮಾದರಿ ಸಂಗ್ರಹಿಸಿದ್ದಾರೆ.
10:08 PM Apr 12, 2024 IST | Ashitha S

ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಯಡಿಯೂರಪ್ಪ ಅವರ ಧ್ವನಿ ಮಾದರಿ ಸಂಗ್ರಹಿಸಿದ್ದಾರೆ.

Advertisement

ಯಡಿಯೂರಪ್ಪ ಅವರ ಮನೆಯಲ್ಲಿ ಫೆ. 2ರಂದು ನಡೆದಿದ್ದ ಕೃತ್ಯದ ಬಗ್ಗೆ ಬಾಲಕಿಯ ತಾಯಿ ದೂರು ನೀಡಿದ್ದರು. ಕೃತ್ಯಕ್ಕೆ ಸಂಬಂಧಪಟ್ಟಂತೆ ಕೆಲ ವಿಡಿಯೊ ಹಾಗೂ ಆಡಿಯೊ ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆ ಸೆಕ್ಷನ್ 8 ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿ ಸದಾಶಿವನಗರ ಠಾಣೆಯಲ್ಲಿ ಮಾರ್ಚ್‌ 14ರಂದು ಎಫ್‌ಐಆರ್ ದಾಖಲಾಗಿತ್ತು.

ಸರ್ಕಾರದ ಆದೇಶದಂತೆ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು, ಸಿಆರ್‌ಪಿಸಿ 164 ಅಡಿ ನ್ಯಾಯಾಧೀಶರ ಎದುರು ಬಾಲಕಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ, ಧ್ವನಿಮುದ್ರಿಕೆ ಸಂಗ್ರಹಿಸುವುದಕ್ಕಾಗಿ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು. ಅದರಂತೆ ಇಂದು ತನಿಖಾಧಿಕಾರಿಗಳ ಕಛೇರಿಗೆ ತೆರಳಿದ ಬಿಎಸ್‌ ವೈ ಅವರ ಧ್ವನಿ ಮುದ್ರಿಕೆ ದಾಖಲಿಸಿಕೊಂಡ ತನಿಖಾಧಿಕಾರಿ, ನಂತರ ವಾಪಸು ಕಳುಹಿಸಿದ್ದಾರೆ.

Advertisement

Advertisement
Tags :
bsyGOVERNMENTindiaKARNATAKALatestNewsNewsKarnatakaಬೆಂಗಳೂರು
Advertisement
Next Article