ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಯಕ್ಷಗಾನ ಪೂರಕ: ಕೃಷ್ಣಾಪುರ ಶ್ರೀ

ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಯಕ್ಷಗಾನ ಕಲೆ ಪೂರಕವಾಗಿದೆ ಎಂದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
11:25 AM Dec 08, 2023 IST | Ashika S

ಉಡುಪಿ: ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಯಕ್ಷಗಾನ ಕಲೆ ಪೂರಕವಾಗಿದೆ ಎಂದು ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

Advertisement

ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಕೃಷ್ಣಾಪುರ ಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷಗಾನ ಕಲಾರಂಗಗಳ ಸಹಯೋಗದೊಂದಿಗೆ ಉಡುಪಿ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾದ ಕಿಶೋರ ಯಕ್ಷಗಾನ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಕ್ಷಗಾನ ನಮ್ಮ ಮಣ್ಣಿನ ಜಾನಪದ ಕಲೆ. ಈ ಕಲೆ ಸಂಗೀತ, ನೃತ್ಯ, ವೇಷ ಸೇರಿದಂತೆ ಎಲ್ಲ ರೀತಿಯ ಮನರಂಜನೆಯನ್ನು ಒಳ ಗೊಂಡಿದೆ ಎಂದರು.

Advertisement

ಮುಖ್ಯ ಅತಿಥಿಗಳಾಗಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಕೆ.ಅಶೋಕ್ ಕಾಮತ್, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಂಗಳೂರಿನ ವೈದ್ಯ ಡಾ.ಜೆ.ಎನ್.ಭಟ್, ಯಕ್ಷಗಾನ ಕಲಾರಂಗ ಅಧ್ಯಕ್ಷ ಎಂ.ಗಂಗಾಧರ ರಾವ್, ಉಪಾಧ್ಯಕ್ಷರಾದ ವಿ.ಜಿ.ಶೆಟ್ಟಿ, ಎಸ್.ವಿ.ಭಟ್, ಗೋಕುಲ್‌ದಾಸ್ ಪ್ರಭು ಉಪಸ್ಥಿತರಿದ್ದರು.

ಯಕ್ಷ ಶಿಕ್ಷಣ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಾರಾಯಣ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

Advertisement
Tags :
LatetsNewsNewsKannadaಕಲೆಪರ್ಯಾಯಯಕ್ಷಗಾನವಿದ್ಯಾಸಾಗರ ತೀರ್ಥ ಸ್ವಾಮೀಜಿವ್ಯಕ್ತಿತ್ವ ವಿಕಸನ
Advertisement
Next Article