ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ಟಾಕ್ಸಿಕ್‌ ನಟ ಯಶ್

ಸ್ಯಾಂಡಲ್ ವುಡ್ ನ ಸ್ಟಾರ್ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಅವರ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಹೀಗಾಗಿ ಎಲ್ಲಾ ಕಡೆಯಿಂದಲೂ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ.
09:56 AM Jan 08, 2024 IST | Ashitha S

ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಟಾರ್ ನಟ, ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಅವರ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದಾರೆ. ಹೀಗಾಗಿ ಎಲ್ಲಾ ಕಡೆಯಿಂದಲೂ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿದೆ.

Advertisement

ಯಶ್ ಗೆ ಕರ್ನಾಟಕ ಮಾತ್ರವಲ್ಲ ವಿಶ್ವಾದ್ಯಂತ ಅಭಿಮಾನಿಗಳಿದ್ದಾರೆ. ಎಲ್ಲರೂ ಯಶ್​ಗೆ ಬರ್ತ್​ಡೇ ಶುಭಾಶಯ ತಿಳಿಸುತ್ತಿದ್ದಾರೆ. ಯಶ್ ಅವರು ಏಕಾಏಕಿ ದೊಡ್ಡ ಸ್ಟಾರ್ ಆದವರಲ್ಲ. ಬಣ್ಣದ ಲೋಕಕ್ಕೆ ಕಾಲಿಡುವಾಗ ಅವರಿಗೆ ಯಾವುದೇ ಹಿನ್ನೆಲೆ ಇರಲಿಲ್ಲ. ಧಾರಾವಾಹಿ ಮೂಲಕ ವೃತ್ತಿಜೀವನ ಆರಂಭಿಸಿದ ಯಶ್ ನಂತರ ಚಿತ್ರರಂಗಕ್ಕೆ ಕಾಲಿಟ್ಟರು. ಈಗ ತಮ್ಮ ಸಾಮ್ರಾಜ್ಯವನ್ನು ಪ್ಯಾನ್ ಇಂಡಿಯಾ ಮಟ್ಟಕ್ಕೆ ವಿಸ್ತರಿಸಿಕೊಂಡಿದ್ದಾರೆ.

ಇನ್ನೂ ಯಶ್ ಅವರು ಟ್ಯಾಕ್ಸಿಕ್ಸ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರುವ ಕಾರಣ ಅಭಿಮಾನಿಗಳ ಜೊತೆ ಬರ್ತ್​ಡೇ ಆಚರಣೆ ಸಾಧ್ಯವಿಲ್ಲ ಎಂದು ಯಶ್ ಈಗಾಗಲೇ ತಿಳಿಸಿದ್ದಾರೆ. ಕೆಜಿಎಫ್ 2 ಸಿನಿಮಾದ ನಂತರ ನಟ ಮತ್ತೇ  ʼಟ್ಯಾಕ್ಸಿಕ್ಸ್ʼ ಚಿತ್ರದ ಮೂಲಕ ಅದ್ಧೂರಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

Advertisement

ಈಗಾಗಲೇ ಅಭಿಮಾನಿಗಳು ತಮ್ಮ ಪ್ರೊಫೈಲ್‌ ಫಿಕ್ಚರ್‌ ಮಾಡಲು ಸಿಡಿಪಿ (ಕಾಮನ್‌ ಡಿಪಿ)ಯೊಂದು ದೊರಕಿದೆ. ಸ್ವತಃ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸಿಡಿಪಿ ಹಂಚಿಕೊಂಡಿದ್ದಾರೆ. ಶಿವಣ್ಣ ಕೈಯಿಂದ ಬಿಡುಗಡೆಗೊಂಡ ಸಿಡಿಪಿ ನೋಡಿ ಯಶ್‌ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

"ಯಶ್ ಹಾಗೂ ಅವರ ಎಲ್ಲಾ ಅಭಿಮಾನಿಗಳಿಗೂ ಶುಭಾಶಯಗಳು. CDP ತುಂಬಾ ಚೆನ್ನಾಗಿದೆ" ಎಂದು ಶಿವರಾಜ್‌ ಕುಮಾರ್‌ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟರ್‌ ತುಂಬಾ ಆಕರ್ಷಕವಾಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಯಶ್‌ ಅಭಿಮಾನಿಗಳು "ಥ್ಯಾಂಕ್‌ ಯು ಶಿವಣ್ಣ" "ಕಿಂಗ್‌ ವಿಷ್‌ ಮಾಡಿದ ಮೇಲೆ ನಮ್ಮದೇನಿದೆ" ಎಂದೆಲ್ಲ ಖುಷಿ ವ್ಯಕ್ತಪಡಿಸಿದ್ದಾರೆ. "ದರ್ಶನ್‌ ಹುಟ್ಟುಹಬ್ಬಕ್ಕೂ ಇದೇ ರೀತಿ ಪೋಸ್ಟರ್‌ ಬಿಡುಗಡೆ ಮಾಡಿ ಶಿವಣ್ಣ" ಎಂದೂ ಕೆಲವರು ಕಾಮೆಂಟ್‌ ಮಾಡಿದ್ದಾರೆ.

 

Advertisement
Tags :
BreakingNewsindiaLatestNewsNewsKannadaSANDALWOODನಟ ಯಶ್‌
Advertisement
Next Article