ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಯಶ್‌ಪಾಲ್‌ ಸುವರ್ಣ ಮನವಿ

ಆಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಇಡೀ ದೇಶವೇ ಸಡಗರದಲ್ಲಿ ಮುಳುಗಿದೆ. ಶ್ರೀ ರಾಮ ಮಂದಿರ ಉದ್ಘಾಟನೆ ಜನವರಿ 22ರಂದು ನಡೆಯಲಿದೆ.
05:06 PM Jan 01, 2024 IST | Ashika S

ಉಡುಪಿ: ಆಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಇಡೀ ದೇಶವೇ ಸಡಗರದಲ್ಲಿ ಮುಳುಗಿದೆ. ಶ್ರೀ ರಾಮ ಮಂದಿರ ಉದ್ಘಾಟನೆ ಜನವರಿ 22ರಂದು ನಡೆಯಲಿದೆ.

Advertisement

ಆದ್ದರಿಂದ ರಾಮ ಮಂದಿರಕ್ಕೆ ಹೋಗಿಬರಲು ಹಾಗೂ ಎಲ್ಲರೂ ರಾಮ ಮಂದಿರ ಉದ್ಘಾಟನೆ ದಿನವನ್ನು ಹಬ್ಬವಾಗಿ ಆಚರಣೆ ಮಾಡಲು ಅನುಕೂಲ ಆಗುವಂತೆ ಜ.22 ರಂದು ಸಾರ್ವತ್ರಿಕ ರಜಾ ದಿನವೆಂದು ಘೋಷಣೆ ಮಾಡುವಂತೆ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರವನ್ನು ಬರೆದಿರುವ ಅವರು, ಕೋಟ್ಯಂತರ ಭಾರತೀಯರ ಶತಮಾನಗಳ ಕನಸು ಜನವರಿ 22ರಂದು ನನಸಾಗುತ್ತಿದೆ. ಹಿಂದೂಗಳ ಶ್ರದ್ಧಾ ಭಕ್ತಿ ಕೇಂದ್ರವಾದ ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯೊಂದಿಗೆ ಭವ್ಯ ರಾಮ ಮಂದಿರ ಉದ್ಘಾಟನೆ ಆಗುತ್ತದೆ. ಶ್ರೀರಾಮ ಮಂದಿರದ ಲೋಕಾರ್ಪಣೆಯು ಭಕ್ತರ ಭಾವನಾತ್ಮಕ ಮತ್ತು ಧಾರ್ಮಿಕತೆಯ ಐತಿಹಾಸಿಕ ಕ್ಷಣವಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ.

Advertisement

ಈ ಪೂಜ್ಯ ದಿನವನ್ನು ದೇಶಾದ್ಯಂತ ದೇವಸ್ಥಾನ, ಮಂದಿರ, ಸಂಘ ಸಂಸ್ತೆಗಳು ಮತ್ತು ಮನೆ ಮನಗಳಲ್ಲಿ ರಾಮ ಜ್ಯೋತಿ ಬೆಳಗಿಸುವುದರೊಂದಿಗೆ ವಿಶೇಷ ಪೂಜೆಗಳು, ಭಜನಾ ಸಂಕೀರ್ತನೆಗಳು ಹಾಗೂ ಅನ್ನ ಸಂತರ್ಪಣೆಗಳ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ದೀಪಾವಳಿಯ ಹಬ್ಬದಂತೆ ಆಚರಿಸಲು ಕೋಟ್ಯಂತರ ಶ್ರೀರಾಮ ಭಕ್ತರು ಇಚ್ಛಿಸಿರುತ್ತಾರೆ.

ಆದ್ದರಿಂದ ಈ ರಾಮಮಂದಿರ ಲೋಕಾರ್ಪಣೆಯ ದಿನದಂದು ಶ್ರೀರಾಮ ದೇವರ ಸೇವೆಯಲ್ಲಿ ಪಾಲ್ಗೊಂಡು ಮತ್ತು ದೇವರ ಕೃಪೆಗೆ ಪಾತ್ರರಾಗಲು ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ದಿನಾಂಕ 22/01.2024ರ ಸೋಮವಾರ ಶಾಲಾ, ಕಾಲೇಜು, ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್‌ ಮತ್ತಿತರ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮನವಿ ಮಾಡಿದ್ದಾರೆ.

Advertisement
Tags :
LatetsNewsNewsKannadaಆಯೋಧ್ಯೆಉದ್ಘಾಟನೆರಾಮ ಮಂದಿರಶ್ರೀ ರಾಮ ಮಂದಿರ
Advertisement
Next Article