ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ ನಿರ್ಮಾಣವಾಗಿದ್ದು, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಉಡುಪಿ ಜಿಲ್ಲೆಗೆ ನಿರಂತರ ಸಿ ಎನ್ ಜಿ ಪೂರೈಕೆಗೆ ಕ್ರಮ ವಹಿಸುವಂತೆ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
08:44 PM May 02, 2024 IST | Ashika S

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ ನಿರ್ಮಾಣವಾಗಿದ್ದು, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಉಡುಪಿ ಜಿಲ್ಲೆಗೆ ನಿರಂತರ ಸಿ ಎನ್ ಜಿ ಪೂರೈಕೆಗೆ ಕ್ರಮ ವಹಿಸುವಂತೆ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.

Advertisement

ಜಿಲ್ಲೆಯಲ್ಲಿ ಸಾವಿರಕ್ಕೂ ಮಿಕ್ಕಿ ಆಟೋಗಳು ಹಾಗೂ ಇತರ ವಾಹನಗಳು ಸಿ ಎನ್ ಜಿ ಇಂದನವನ್ನೇ ಅವಲಂಬಿಸಿದ್ದು, ಇಂಧನ ಕೊರತೆಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ.

ದಿನೇ ದಿನೇ ಸಿ ಎನ್ ಜಿ ಆಧಾರಿತ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದರೂ, ಸಿ ಎನ್ ಜಿ ತುಂಬುವ ಬಂಕ್ ಗಳ ಕೊರತೆಯಿಂದ ವಾಹನ ಮಾಲೀಕರು, ಆಟೋ ಚಾಲಕರು ಬಾಡಿಗೆ ಬಿಟ್ಟು ಬಂಕ್ ಗಳ ಮುಂದೆ ಕಾಯುವ ಪರಿಸ್ಥಿತಿ ಎದುರಾಗಿದೆ.

Advertisement

ಶೀಘ್ರದಲ್ಲಿಯೇ ಪೆಟ್ರೋಲಿಯಂ ಸಚಿವಾಲಯದ ಸಚಿವರು ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Tags :
LatetsNewsNewsKarnatakaPetroleumUDUPIYashpal Suvarnaಇಂಧನ ಕೊರತೆ
Advertisement
Next Article