For the best experience, open
https://m.newskannada.com
on your mobile browser.
Advertisement

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
07:28 AM May 18, 2024 IST | Ashika S
8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌  ಗುಡುಗು  ಮಿಂಚು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Advertisement

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Advertisement
Tags :
Advertisement