For the best experience, open
https://m.newskannada.com
on your mobile browser.
Advertisement

ಕುಕ್ಕೆ ದೇವಳಕ್ಕೆ ಯೇಸುರಾಜ್ ನೂತನ ಎಇಒ; ಶರಣ್ ಪಂಪ್ವೆಲ್ ಅಪಸ್ವರ, ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರಕಾರ ನೇಮಿಸಿತ್ತು. ನೂತನ ಎಇಒ ಅವರಿಗೆ ಪ್ರಭಾರ ಎಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಳ್ಯ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಅಧಿಕಾರ ಹಸ್ತಾಂತರಿಸಿದರು.
10:54 AM May 02, 2024 IST | Ashitha S
ಕುಕ್ಕೆ ದೇವಳಕ್ಕೆ ಯೇಸುರಾಜ್ ನೂತನ ಎಇಒ  ಶರಣ್ ಪಂಪ್ವೆಲ್ ಅಪಸ್ವರ  ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಕುಕ್ಕೆ ದೇವಳದ ನೂತನ ಎಇಒ ಆಗಿ ಸರಕಾರ ನೇಮಿಸಿತ್ತು. ನೂತನ ಎಇಒ ಅವರಿಗೆ ಪ್ರಭಾರ ಎಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಳ್ಯ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಅಧಿಕಾರ ಹಸ್ತಾಂತರಿಸಿದರು.

Advertisement

ಇನ್ನು ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿಯಲ್ಲಿ ದೇವಸ್ಥಾನಗಳಿಗೆ ಹಿಂದೂ ಅಧಿಕಾರಿಗಳನ್ನು ಮಾತ್ರ ನೇಮಿಸಬೇಕು ಎಂದು ನಿಯಮ ಇದೆ .ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ಯೇಸುರಾಜ್ ಅವರು ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ ಎಂಬುದನ್ನು ಸರ್ಕಾರ ದೃಢೀಕರಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮುಖಂಡ ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ.

ಈ ಕುರಿತಂತೆ ಸ್ಪಷ್ಟನೆ ನೀಡಿರುವ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಬಿಜೆಪಿಯ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್ ಯುನಿವರ್ಸಿಟಿ ಆಟವಾಗಿದೆ. ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದು, ದಾಖಲೆಗಳು ಇಲ್ಲಿವೆ. ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಹತ್ತಿರ ಇರೋದರಿಂದ ಜನರನ್ನು ದಾರಿ ತಪ್ಪಿಸಿ ಅವರ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಭಯ ಶುರುವಾಗಿರುವುದು ಸ್ಪಷ್ಟ ಎಂದು ಹೇಳಿದ್ದಾರೆ.

Advertisement

ಸದ್ಯ ಈ ವಿಚಾರ ಕೂಡ ರಾಜಕೀಯ ವಲಯದಲ್ಲಿ ಸಖತ್‌ ಸುದ್ದು ಮಾಡ್ತಿದೆ.

Advertisement
Tags :
Advertisement