For the best experience, open
https://m.newskannada.com
on your mobile browser.
Advertisement

ಗುರಾಯಿಸಿದ ಯುವಕನಿಗೆ ಚಾಕುವಿನಿಂದ ಇರಿದು ವ್ಯಕ್ತಿ ಪರಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ ಬೇಗೂರು ಗ್ರಾಮದಲ್ಲಿ ಗುರಾಯಿಸಿ ನಿಂದಿಸಿದ್ದಾಗಿ ವ್ಯಕ್ತಿಯೊಬ್ಬ ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.
08:06 AM Jan 30, 2024 IST | Gayathri SG
ಗುರಾಯಿಸಿದ ಯುವಕನಿಗೆ ಚಾಕುವಿನಿಂದ ಇರಿದು ವ್ಯಕ್ತಿ ಪರಾರಿ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ ಬೇಗೂರು ಗ್ರಾಮದಲ್ಲಿ ಗುರಾಯಿಸಿ ನಿಂದಿಸಿದ್ದಾಗಿ ವ್ಯಕ್ತಿಯೊಬ್ಬ ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.

Advertisement

ಮಂಜುನಾಥ್ ಹಲ್ಲೆ ಮಾಡಿದ ಆರೋಪಿಯಾಗಿದ್ದು, ಅಶ್ವತ್ಥ್​ ಕುಮಾರ್ (30)​ ಚಾಕು ಇರಿತಕ್ಕೊಳಗಾದ ಯುವಕನಾಗಿದ್ದಾನೆ. ಅಶ್ವತ್ಥ್ ಕುಮಾರ್ ಸೂರ್ಯ ಗ್ಯಾಸ್ ಎಂಬ​ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ತನ್ನನ್ನು ಗುರಾಯಿಸಿದ್ದಲ್ಲದೆ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಮಂಜುನಾಥ್ ತನ್ನ ಡಿಯೋ ಬೈಕ್​ನಲ್ಲಿ ಬಂದು ಅಶ್ವತ್ಥ್​ ಕುಮಾರ್​ಗೆ ಚಾಕು ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಗಾಯಗೊಂಡ ಅಶ್ವತ್ಥ್ ಕುಮಾರ್​ ಅವರನ್ನು ಕೂಡಲೇ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಸದ್ಯ ನೆಲಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ತನಿಖೆ ಆರಂಭಿಸಿದ್ದಾರೆ.

Advertisement

Advertisement
Tags :
Advertisement