ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ನಮ್ಮ ಮೆಟ್ರೋದಲ್ಲಿ ಈ ಹಿಂದೆ ಎರಡ್ಮೂರು ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಮತ್ತೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಬೆಳಕಿಗೆ ಬಂದಿದೆ.
10:50 AM Dec 08, 2023 IST | Ashika S

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಈ ಹಿಂದೆ ಎರಡ್ಮೂರು ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಮತ್ತೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಬೆಳಕಿಗೆ ಬಂದಿದೆ.

Advertisement

ಆರೋಪಿ ಲೋಕೇಶ್​ ನಿನ್ನೆ ಬೆಳಗ್ಗೆ 9.40ರ ಸುಮಾರಿಗೆ ಬೆಂಗಳೂರಿನ ರಾಜಾಜಿನಗರದ ಮೆಟ್ರೋದಲ್ಲಿ  22 ವರ್ಷದ ಯುವತಿಯ ಮೈಕೈ ಮುಟ್ಟಿ ಪರಾರಿಯಾಗಲು ಯತ್ನಿಸಿದ್ದ.

ಯುವತಿ ಕೂಗುತ್ತಿದ್ದಂತೆ ಮುಂದಿನ ನಿಲ್ದಾಣದಲ್ಲಿ ಆರೋಪಿ ಲೋಕೇಶ್​ನನ್ನು ಮೆಟ್ರೋ ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಉಪ್ಪಾರಪೇಟೆ ಪೊಲೀಸರಿಗೆ ಒಪ್ಪಿಸಲಾಗಿದೆ.

Advertisement

ತನಿಖೆಯ ವೇಳೆ ಆರೋಪಿ ಮೇಲೆ ಈ ಹಿಂದೆ ಕೂಡ ಕೆಲ ಕೇಸ್​ ಗಳಿತ್ತು. ಈ ಹಿಂದೆ ಬಿಎಂಟಿಸಿ ಬಸ್​ನಲ್ಲಿ ಯುವತಿಯ ಮೊಬೈಲ್ ಕಳ್ಳತನ ಮಾಡಲು ಹೋಗಿ ಸಿಕ್ಕಿಕೊಂಡಿದ್ದ. ಆರೋಪಿ ಬಳಿಯಿಂದ 20 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.

Advertisement
Tags :
LatestNewsNewsKannadaಆರೋಪಮೆಟ್ರೋಯುವತಿಲೈಂಗಿಕ ಕಿರುಕುಳ
Advertisement
Next Article