ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಯುವಕ ಆತ್ಮಹತ್ಯೆ

ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ  ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ  ನಡೆದಿದೆ.
04:02 PM Mar 21, 2024 IST | Ashika S

ಬೆಂಗಳೂರು: ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ  ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ  ನಡೆದಿದೆ.

Advertisement

ದುರದೃಷ್ಟವಶಾತ್ ಮೆಟ್ರೋ ರೈಲಿಗೆ ಸಿಲುಕಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮಾರ್ಚ್ 21ರ ಮಧ್ಯಾಹ್ನ 2:10ರ ಸುಮಾರಿಗೆ ಹಳಿಗೆ ಹಾರಿದ್ದಾನೆ.

ಮೆಟ್ರೋ ಬರುತ್ತಿದ್ದುದನ್ನು ಗಮನಿಸಿದ ವ್ಯಕ್ತಿ ಟ್ರ್ಯಾಕ್​ಗೆ ಹಾರಿದ್ದಾನೆ. ಪರಿಣಾಮ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳಿಂದ ಮಾಹಿತಿ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

ಮೃತ ಯುವಕ ಯಾರು? ಯಾಕಾಗಿ ಆತ್ಮಹತ್ಯೆ ಮಾಡಿಕೊಂಡ ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕಾರಣಕ್ಕೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸಿಬ್ಬಂದಿ ಮೆಟ್ರೋದಿಂದ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ.

ಸದ್ಯ ಅತ್ತಿಗುಪ್ಪೆ ನಿಲ್ದಾಣದಲ್ಲಿ ರೈಲು ಓಡಾಟ ಸ್ಥಗಿತವಾಗಿದ್ದು, ಮಾಗಡಿ ರೋಡ್‌ನಿಂದ ವೈಟ್ ಫೀಲ್ಡ್‌ವರೆಗೆ ಮಾತ್ರ ಮೆಟ್ರೋ ಸಂಚಾರ ಇದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟದವರೆಗೆ ಯಾವುದೇ ಸೇವೆ ಇಲ್ಲ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
crimeLatetsNewsNewsKarnatakaಆತ್ಮಹತ್ಯೆ
Advertisement
Next Article