For the best experience, open
https://m.newskannada.com
on your mobile browser.
Advertisement

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.
11:50 AM May 11, 2024 IST | Ashika S
ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಕಲಬುರಗಿ: ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಕಲಬುರಗಿಯ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ  ನಡೆದಿದೆ.

Advertisement

ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು.

ದುಷ್ಕರ್ಮಿಗಳು ಜಾವೀದ್​​ರನ್ನು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆದೊಯ್ದಿದ್ದರು. ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಹತ್ಯೆಗೈದ ಆರೋಪ ಕೇಳಿಬಂದಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

ಸಚಿವ ಪ್ರಿಯಾಂಕ್ ಖರ್ಗೆ ತವರೂರಲ್ಲಿ ಹೆಚ್ಚುತ್ತಿದೆ ಅಪರಾಧ: ಕಲಬುರಗಿ ನಗರದ ಅಶೋಕ್ ನಗರ ಬಡಾವಣೆಯಲ್ಲಿ ಅಂಬೇಡ್ಕರ್ ಜಯಂತಿ ವೇಳೆ ಅಶೋಕ್ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿತ್ತು. ಘಟನೆ ಸಂಬಂಧ ನಂತರ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಇದಕ್ಕೂ ಕೆಲವು ಸಮಯ ಹಿಂದೆ ಕಲಬುರಗಿಯ ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತ ಗಿರೀಶ್ ಚಕ್ರ ಎಂಬವರನ್ನು ಪಾರ್ಟಿ ಮಾಡುವ ನೆಪದಲ್ಲಿ ಕರೆದು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಬಿಎಸ್​ಎನ್​ಎಲ್ ಸಲಹಾ ಸಮಿತಿ ನಿರ್ದೇಶಕರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಅವರನ್ನು ಹತ್ಯೆ ಮಾಡಲಾಗಿತ್ತು.ರವಿಕುಮಾರ್ (45) ಎಂಬವರನ್ನು ಕಲ್ಲಿನಿಂದ ಜಜ್ಜಿ, ಬಳಿಕ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದಲ್ಲಿ ನಡೆದಿತ್ತು.

ಸಚಿವ ಪ್ರಿಯಾಂಕ್ ಖರ್ಗೆ ತವರೂರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಹಲ್ಲೆ, ಕೊಲೆ ಮತ್ತಿತರ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಈಗಾಗಲೇ ಈ ಬಗ್ಗೆ ಪ್ರತಿಪಕ್ಷ ಬಿಜೆಪಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಮಧ್ಯೆ ಜಿಲ್ಲೆಯಲ್ಲಿ ಅಪರಾಧ ಕೃತಿಗಳು ಮುಂದುವರಿದಿವೆ.

Advertisement
Tags :
Advertisement