For the best experience, open
https://m.newskannada.com
on your mobile browser.
Advertisement

ಮಾರಕ ʼಝಿಕಾ ವೈರಸ್ʼ ಪತ್ತೆ: ಆರೋಗ್ಯ ಇಲಾಖೆ ಹೈ ಅಲರ್ಟ್

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಜಿಕಾ ವೈರಸ್ ಪತ್ತೆಯಾಗಿದೆ. ಸೊಳ್ಳೆಗಳ ರಕ್ತದಲ್ಲಿ ಜಿಕಾ ವೈರಸ್ ಪತ್ತೆ ಹಿನ್ನಲೆ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
10:51 AM Nov 02, 2023 IST | Ashitha S
ಮಾರಕ ʼಝಿಕಾ ವೈರಸ್ʼ ಪತ್ತೆ  ಆರೋಗ್ಯ ಇಲಾಖೆ ಹೈ ಅಲರ್ಟ್

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಝಿಕಾ ವೈರಸ್ ಪತ್ತೆಯಾಗಿದೆ. ಸೊಳ್ಳೆಗಳ ರಕ್ತದಲ್ಲಿ ಜಿಕಾ ವೈರಸ್ ಪತ್ತೆ ಹಿನ್ನಲೆ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

Advertisement

ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ವಿವಿದೆಡೆ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‌ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು, ಜಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ನಿಂತ ನೀರು ಈ ಸೊಳ್ಳೆಗಳ ಉತ್ಪತ್ತಿ ತಾಣ. ಇದರಿಂದ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಕೀಲು ಮತ್ತು ಸ್ನಾಯು ನೋವು ಕಾಣಿಸಿಕೊಳ್ಳುತ್ತದೆ. ಇನ್ನು ಬಹುತೇಕ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಹೀಗಾಗಿ ಜ್ವರದಂತಹ ಲಕ್ಷಣ ಕಂಡು ಬಂದರೆ ತಕ್ಷಣವೇ ವೈದ್ಯರನ್ನು ಭೇಟಿ ಆಗಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

Advertisement

Advertisement
Tags :
Advertisement